ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ ಕೋರಿ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನಾ ರ್ಯಾಲಿಗೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಚಾಲನೆ ನೀಡಿದರು.
ಈಗಾಗಲೇ ಸಾಕಷ್ಟು ವಿವಾದ ಸೃಷ್ಟಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅವಕಾಶ ನೀಡುವಂತ ಮಾತು ಸಾಕಷ್ಟು ಮುನ್ನೆಲೆಗೆ ಬಂದಿದ್ದು, ಈ ನಿಟ್ಟಿನಲ್ಲಿ ದುರ್ಗದ ಬೈಲಿನಿಂದ ದಾಜಿಬಾನ್ ಪೇಟೆ ಮೂಲಕ ಹೊರಟ ಪ್ರತಿಭಟನೆಗೆ ಚಾಲನೆ ನೀಡಲಾಯಿತು.
ಇನ್ನು ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರಮೋದ್ ಮುತಾಲಿಕ್ ಭಾಗಿಯಾಗುವ ಮೂಲಕ ಸಾರ್ವಜನಿಕರಿಂದ ಸಹಿ ಸಂಗ್ರಹಿಸುತ್ತ ಪ್ರತಿಭಟನೆ ನಡೆಸಿದ್ದು, ವಿಶೇಷವಾಗಿದೆ. ರಾಣಿ ಚೆನ್ನಮ್ಮ ಮೈದಾನ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಭಜರಂಗದಳ, ಹಿಂದೂ ಜಾಗರಣ ವೇದಿಕೆ , ಶ್ರೀರಾಮ ಸೇನಾ ಸೇರಿದಂತೆ ವಿವಿಧ ಗಣೇಶೋತ್ಸವ ಮಂಡಳಿಗಳಿಂದ ಪ್ರತಿಭಟನೆ ನಡೆಸಲಾಯಿತು.
ಮಹಾನಗರ ಪಾಲಿಕೆ ಕಚೇರಿ ಎದುರು ಒಂದು ಗಂಟೆಯ ಕಾಲ ಭಜನೆ ಮಾಡುವುದು ಹಾಗೂ ಆಯುಕ್ತರ ಕಚೇರಿ ಮುತ್ತಿಗೆ ಹಾಕಲಿರುವ ಪ್ರತಿಭಟನಾಕಾರರು ವಿನೂತನ ಪ್ರತಿಭಟನೆ ನಡೆಸಲಿದ್ದಾರೆ.
Kshetra Samachara
22/08/2022 01:20 pm