ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿರುವ ಈದ್ಗಾ ಮೈದಾನವನ್ನು ಗಣೇಶ ಚತುರ್ಥಿ ಆಚರಣೆಗೆ ನೀಡುವಂತೆ ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಸಾಮಾನ್ಯ ಸಭೆಯ ದಿನವೂ ಮುಂದುವರೆದಿದೆ.
ಹೌದು.. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವಂತೆ ಸಾಕಷ್ಟು ರೀತಿಯ ಹೋರಾಟ ನಡೆದಿದ್ದು, ಈ ಹಿನ್ನೆಲೆಯಲ್ಲಿ ಹಿಂದೂಸ್ತಾನ್ ಜನತಾ ಪಾರ್ಟಿಯಿಂದ ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಹುಬ್ಬಳ್ಳಿಯ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದು, ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
25/08/2022 12:50 pm