ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ; ಸಮಿತಿ ಅಧ್ಯಕ್ಷರನ್ನು ಭೇಟಿ ಮಾಡಿದ ಮುತಾಲಿಕ್

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆ ವಿಚಾರದ ಹಿನ್ನೆಲೆಯಲ್ಲಿ, ನಿನ್ನೆ ನಡೆದ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ, ಪಾಲಿಕೆ ಸದಸ್ಯರ ಸಮಿತಿಯನ್ನು ರಚನೆ ಮಾಡಿದ್ದಾರೆ. ಇಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು ಸಮಿತಿ ಅಧ್ಯಕ್ಷರನ್ನು ಭೇಟಿ ಮಾಡಿದರು.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಮಾಡಬೇಕೆಂದು ಗಜಾನನ ಮಂಡಳಿ ಸೇರಿದಂತೆ ಹಲವಾರು ಸಂಘಟನೆಗಳು ಒತ್ತಾಯ ಮಾಡಿದ್ದರು. ಈ ಕುರಿತು ಪಾಲಿಕೆ ಮೇಯರ್ ಪಾಲಿಕೆ ಸದಸ್ಯ ಸಮಿತಿಯನ್ನು ರಚನೆ ಮಾಡಿದ್ದಾರೆ. ಈ ಹಿನ್ನೆಲೆ, ಪಾಲಿಕೆಗೆ ಭೇಟಿ ನೀಡಿದ ಮುತಾಲಿಕ್ ಅವರು, ಸಮಿತಿ ಅಧ್ಯಕ್ಷ ಸಂತೋಷ ಚವ್ಹಾಣ ಭೇಟಿ ಮಾಡಿ, ಪಾಲಿಕೆ ಸದನದ ಸಮಿತಿ ವರದಿ ಆಧಾರಿಸಿ ಅನುಮತಿಗೆ ನಿರ್ಧಾರ ಕೈಗೊಳ್ಳಿ ಎಂದು ಒತ್ತಾಯಿಸಿದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

26/08/2022 03:45 pm

Cinque Terre

206.39 K

Cinque Terre

8

ಸಂಬಂಧಿತ ಸುದ್ದಿ