ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆ ವಿವಾದ ಬಗೆಹರಿಯದ ಕಗ್ಗಂಟಾಗಿದೆ. ಸದ್ಯ ಗಣೇಶೋತ್ಸವಕ್ಕೆ ಕೆಲವೇ ದಿನಗಳು ಇರುವುದರಿಂದ, ಇಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮಹಾನಗರ ಪಾಲಿಕೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು, ಗಜಾನನ ಮಂಡಳಿ ಸೇರಿದಂತೆ ಹಲವಾರು ಕನ್ನಡ ಪರ ಸಂಘಟನೆಗಳು ಸುಮಾರು ಒಂದು ತಿಂಗಳಿನಿಂದ ಮನವಿ ಹೋರಾಟ ಮಾಡುತ್ತಿದ್ದಾರೆ. ಆದ್ರೆ ಪಾಲಿಕೆ ಮಾತ್ರ ಅನುಮತಿ ನೀಡಲು ಹಿಂಜರಿಯುತ್ತಿದೆ. ಆದ ಕಾರಣ ಇತ್ತ ಸಂಘಟನೆಗಳು ನಾವು ಈದ್ಗಾ ಮೈದಾನದಲ್ಲಿ ಗಣೇಶನನ್ನು ಪ್ರತಿಷ್ಟಾಪನೆ ಮಾಡಿಯೇ ಮಾಡ್ತೀವಿ ಅಂತ ಪಣ ತೊಟ್ಟಿದ್ದಾರೆ. ಅದಕ್ಕಾಗಿ ಇಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಆಗದಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದ್ಯ ಈದ್ಗಾ ಮೈದಾನದಲ್ಲಿ 8 ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.
ಇನ್ನು ಬೆಂಗಳೂರಿನ ಚಾಮರಾಜನಗರದ ಈದ್ಗಾ ಮೈದಾನದಲ್ಲಿ ಗಣಪತಿ ಕೂರಿಸಲು ಅನುಮತಿ ನೀಡಿದ್ದು, ಹುಬ್ಬಳ್ಳಿಯಲ್ಲಿರುವ ಗಜಾನನ ಮಂಡಳಿ, ಶ್ರೀರಾಮ ಸೇನೆ ಸೇರಿದಂತೆ ಹಲವಾರು ಸಂಘಟನೆಗಳು ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ಕೊಡಿ ಎಂದು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ವಿವಾದದ ನಡುವೆಯೂ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ನಡೆಯುತ್ತಾ? ಎಂದು ಕಾದು ನೋಡಬೇಕಿದೆ.
Kshetra Samachara
27/08/2022 04:14 pm