ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹೈ ವೋಲ್ಟೇಜ್ ಪಡೆದುಕೊಂಡ ಈದ್ಗಾ ವಿಚಾರ: ಕೇಂದ್ರ ಸಚಿವರ ಮನೆಯಲ್ಲಿ ಮಹತ್ವದ ಸಭೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದ್ದು, ಜನಪ್ರತಿನಿಧಿಗಳ ಹಾಗೂ ಪಾಲಿಕೆ ಚುನಾಯಿತ ಪ್ರತಿನಿಧಿಗಳ ದಂಡು ಕೇಂದ್ರ ಸಚಿವರ ಮನೆಯತ್ತ ಹರಿದು ಬಂದಿದೆ.

ಹೌದು..‌ಬಿಜೆಪಿ ಸಂಘದ ಪ್ರಮುಖರು, ಅಧಿಕಾರಿಗಳು ಭಾಗಿಯಾಗಿದ್ದು, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಎಡಿಜಿಪಿ ಅಲೋಕ್ ಕುಮಾರ್, ಪೊಲೀಸ್ ಕಮಿಷನರ್ ಲಾಭೂರಾಮ್, ಪಾಲಿಕೆ ಕಮಿಷನರ್ ಡಾ.ಗೋಪಾಲಕೃಷ್ಣ, ಸದಸ್ಯ ಸಮಿತಿಯ ಐವರು ಕಾರ್ಪೋರೇಟರ್ಸ್ ಸಹ ಭಾಗಿಯಾಗುವ ಸಾಧ್ಯತೆ ಇದ್ದು, ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಮೂರು ದಿನದ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವ ಸಾಧ್ಯತೆ ಇದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ನಿಗಾವಹಸಿಲು ಪ್ರಹ್ಲಾದ್ ಜೋಶಿ ಸೂಚನೆ ನೀಡಿದ್ದು, ಮುಂದಿನ ನಿರ್ಧಾರದವರೆಗೆ ಕಾಯಬೇಕಿದೆ.

Edited By :
Kshetra Samachara

Kshetra Samachara

29/08/2022 03:54 pm

Cinque Terre

19.4 K

Cinque Terre

3

ಸಂಬಂಧಿತ ಸುದ್ದಿ