ಹುಬ್ಬಳ್ಳಿ: ದೇಶದಾದ್ಯಂತ ಗಣೇಶ ಸಂಭ್ರಮ ಮುಗಿಲು ಮುಟ್ಟಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ಮಹಾಮಾರಿಯಿಂದಾಗಿ ಸರಳವಾಗಿ ಆಚರಣೆ ಮಾಡಲ್ಪಟ್ಟ ಗಣೇಶೋತ್ಸವವನ್ನು ಈ ಬಾರಿ ಎಲ್ಲರೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದಾರೆ.
ಅದರಂತೆ ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ ಹಾಗೂ ರಜತ್ ಉಳ್ಳಾಗಡ್ಡಿಮಠ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಶಾಂತಿಯ ಪ್ರತೀಕವಾದ ಬೆಳ್ಳಿಯ ನಾಣ್ಯಗಳನ್ನು ವಿತರಿಸುವ ಮೂಲಕ ಭಕ್ತಿಭಾವ ಮೆರೆದಿದ್ದಾರೆ.
ಹೌದು, ಈಗಾಗಲೇ ಕೊರೊನಾ ಲಾಕ್ ಡೌನ್ ಸಮಯದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಿದ ಫ್ರೆಂಟ್ ಲೈಟ್ ವರ್ಕರ್ಸ್ ಗಳಿಗೆ ಸನ್ಮಾನಿಸುವ ಹಾಗೂ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಕುಟುಂಬಗಳಿಗೆ ನೆರವು ನೀಡುವ ಕೆಲಸ ಮಾಡಿದೆ. ಈ ಮೂಲಕ ರಜತ್ ಉಳ್ಳಾಗಡ್ಡಿಮಠ ಫೌಂಡೇಶನ್ ಬಡವರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಸಾಮಾಜಿಕ ಕಾರ್ಯಗಳಿಗೂ ಸೈ ಎನಿಸಿಕೊಂಡಿದೆ.
ಹುಬ್ಬಳ್ಳಿ - ಧಾರವಾಡ ಅವಳಿನಗರದ ಜನರ ಸಮಸ್ಯೆಗಳಿಗೆ ಧ್ವನಿಯಾಗಿ, ಶೋಷಿತರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ.
ಗಣೇಶೋತ್ಸವ ಮಂಡಳಿಗಳಿಗೆ ಬೆಳ್ಳಿ ನಾಣ್ಯ ವಿತರಣೆ….
ಹೌದು, ಈಗಾಗಲೇ ಹಲವಾರು ಸಾಮಾಜಿಕ ಕಾರ್ಯಗಳ ಮೂಲಕ ಹೆಸರುವಾಸಿಯಾಗಿರುವ ರಜತ್ ಉಳ್ಳಾಗಡ್ಡಿಮಠ, ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟು ಸುಮಾರು 2 ಕೆಜಿ ಬೆಳ್ಳಿ ಯಲ್ಲಿ ಹುಬ್ಬಳ್ಳಿಯ ಧಾರವಾಡದ 200 ಕ್ಕೂ ಅಧಿಕ ಸಾರ್ವಜನಿಕ ಗಣೇಶೋತ್ಸವ ಮಂಡಳಿಗೆ ನಾಣ್ಯಗಳನ್ನು ವಿತರಿಸಿ ಸಾರ್ಥಕ ಕೆಲಸ ಮಾಡಿದ್ದಾರೆ.
ಈ ಮೂಲಕ ರಜತ್ ಉಳ್ಳಾಗಡ್ಡಿಮಠ ಫೌಂಡೇಶನ್ ಸಾಮಾಜಿಕವಾಗಿ, ಧಾರ್ಮಿಕವಾಗಿ, ಸಾಂಸ್ಕೃತಿಕ ಹಾಗೂ ಬಡವರ ಪಾಲಿನ ಕಾಮಧೇನುವಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದು, ಅದೇಷ್ಟೋ ಜನರ ಕತ್ತಲಿನ ಬದುಕಿಗೆ ದಾರಿ ದೀಪವಾಗುವ ನಿರಂತರ ಪ್ರಯತ್ನಕ್ಕೆ ಮುಂದಾಗಿದೆ.
ಒಟ್ಟಿನಲ್ಲಿ ಒಂದೊಂದು ವಿಶಿಷ್ಟ ಕಾರ್ಯಗಳ ಮೂಲಕ ರಜತ್ ಉಳ್ಳಾಗಡ್ಡಿಮಠ ಫೌಂಡೇಷನ್ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/09/2022 07:32 pm