ಹುಬ್ಬಳ್ಳಿ: ಇಂದು ನಗರದಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಆಯೋಜಿಸಿರುವ, ಎರಡು ದಿನಗಳ ಟೆಕ್ಲರೇಶನ್ 2022 ಅಂಗವಾಗಿ, 5K ವಾಕಥಾನಗೆ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವತ್ಥ ನಾರಾಯಣ ಅವರು ಚಾಲನೆ ನೀಡಿದರು.
ನಗರದ ಡೆನಿಸನ್ ಹೋಟೆಲ್‌ನಿಂದ ಆರಂಭಗೊಂಡ 5K ವಾಕಥಾನ ಡಾಲರ್ಸ್ ಕಾಲೋನಿ, ಅಕ್ಷಯ ಕಾಲನಿ, ಗೋಕುಲ ರಸ್ತೆಯಲ್ಲಿ ಸಂಚರಿಸಿ ಮತ್ತೆ ಡೆನಿಸನ್ ಹೊಟೇಲಿನಲ್ಲಿ ಮುಕ್ತಾಯಗೊಂಡಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ ಅವರು ಇಂದು ಮಾಹಿತಿ ತಂತ್ರಜ್ಞಾನವು ಬೀದಿ ವ್ಯಾಪಾರಿಗಳಿಂದ ಹಿಡಿದು ಪ್ರತಿಯೊಬ್ಬರ ಅವಿಭಾಜ್ಯ ಅಂಗವಾಗಿದೆ. ಇದನ್ನು ಇನಷ್ಟು ಪ್ರಚಾರ ಮಾಡುವ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದ ಅಂಗವಾಗಿ ವಾಕಥಾನ ಹಮ್ಮಿಕೊಳ್ಳಲಾಗಿದೆ ಎಂದು ನುಡಿದರು. ವಾಕಥಾನನಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಿಇಒ ಸಂಜೀವ ಗುಪ್ತ ಮತ್ತು ಇತರ ಅಧಿಕಾರಿಗಳು ಭಾಗಿಯಾಗಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/10/2022 12:01 pm