ಬೆಳಗಾವಿ: ನಗರದಲ್ಲಿ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಸ್ಮಾರಕ ನಿರ್ಮಾಣ ಬಗ್ಗೆ ಯೋಚನೆ ಇದೆ. ಈ ಕುರಿತು ಜನಪ್ರತಿನಿಧಿಗಳು, ಅಭಿಮಾನಿಗಳು, ಕುಟುಂಬದ ಸದಸ್ಯರ ಜತೆಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ, ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಸುರೇಶ್ ಅಂಗಡಿ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಇಂದು ಕುಟುಂಬ ಸದಸ್ಯರು ಬೆಳಗಾವಿಗೆ ವಾಪಸ್ ಆಗಿದ್ದಾರೆ. ಬೆಳಗಾವಿಯ ವಿಶೇಶ್ವರಯ್ಯ ನಗರದಲ್ಲಿ ಇರೋ ನಿವಾಸದಲ್ಲಿ ಶಿವಗಣಾರಾಧನೆಯನ್ನು ನಡೆಸಲಾಯಿತು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, 'ಸುರೇಶ್ ಅಂಗಡಿ ಅವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತರಲು ಸಾಕಷ್ಟು ಪ್ರಯತ್ನ ಮಾಡಲಾಯಿತು. ಆದರೆ ಇದಕ್ಕೆ ಕೊರೊನಾ ನಿಯಮ ಹಾಗೂ ಕಾನೂನಿನ ತೊಡಕು ಹಿನ್ನೆಲೆಯಲ್ಲಿ ಸಾಧ್ಯವಾಗಲಿಲ್ಲ ಎಂದರು.
ಸುರೇಶ್ ಅಂಗಡಿ ರೈಲ್ವೇ ಮಂತ್ರಿಯಾಗಿ ಒಂದೇ ವರ್ಷದಲ್ಲಿ ಇಡೀ ರಾಜ್ಯದಲ್ಲಿ ಅನೇಕ ಉತ್ತಮ ಕೆಲಸವನ್ನು ಮಾಡಿದ್ದಾರೆ. ಬೆಂಗಳೂರು, ಮೈಸೂರು, ಬೀದರ್ ಸೇರಿ ಎಲ್ಲಾ ಭಾಗದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಬೆಳಗಾವಿ, ಕಿತ್ತೂರು ಹಾಗೂ ಧಾರವಾಡ ರೈಲು ಯೋಜನೆ ಅನೇಕ ಸಲ ಬಜೆಟ್‌ನಲ್ಲಿ ಘೋಷಣೆಯಾಗಿದೆ ಎಂದು ಶ್ಲಾಘಿಸಿದ್ದಾರೆ.
Kshetra Samachara
25/09/2020 07:05 pm