ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡಕ್ಕೆ ಬಂದ ಕನಕಪುರ ಬಂಡೆ

ಧಾರವಾಡ: ಕೆಪಿಸಿಸಿ ಅಧ್ಯಕ್ಷ ಹಾಗೂ ಕನಕಪುರ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ ಅವರು ಇಂದು ಧಾರವಾಡಕ್ಕೆ ಭೇಟಿ ನೀಡಿದರು.

ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯಕೀಯ ಹಾಗೂ ಅರೆವೈದ್ಯಕೀಯ ನೌಕರರ ಅಹವಾಲು ಆಲಿಸಿದ ಡಿಕೆಶಿ, ಸರ್ಕಾರಕ್ಕೆ ಅವರ ಬೇಡಿಕೆಗಳನ್ನು ಮುಟ್ಟಿಸಲಾಗುವುದು ಎಂದರು.

ನಂತರ ಕಾಂಗ್ರೆಸ್ ಪಕ್ಷದ ಕಚೇರಿಗೆ ತೆರಳಿದ ಅವರು, ಅಲ್ಲಿ ಪಕ್ಷ ಸಂಘಟನೆ ಸಂಬಂಧ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ. ಕಳೆದ ವರ್ಷ ನೆರೆ ಪ್ರವಾಹದಲ್ಲಿ ಮನೆಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಜನರ ಕಷ್ಟವನ್ನು ಸ್ವತಃ ಯಡಿಯೂರಪ್ಪನವರೇ ಬಂದು ನೋಡಬೇಕು ಎಂದರು.

ವಿಧಾನಪರಿಷತ್ ಚುನಾವಣೆಗೆ ಇನ್ನೂ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಗೊಂಡಿಲ್ಲ. ಉಪಚುನಾವಣೆಗೆ ಟಿಕೆಟ್ ನೀಡುವ ವಿಚಾರವನ್ನು ರಾಮಲಿಂಗಾರಡ್ಡಿ ಅವರಿಗೆ ವಹಿಸಲಾಗಿದೆ ಎಂದರು.

Edited By : Nagesh Gaonkar
Kshetra Samachara

Kshetra Samachara

03/10/2020 12:38 pm

Cinque Terre

38.86 K

Cinque Terre

3

ಸಂಬಂಧಿತ ಸುದ್ದಿ