ಧಾರವಾಡ: ಗದಗ, ಹಾವೇರಿ, ಉತ್ತರ ಕನ್ನಡ ಹಾಗೂ ಧಾರವಾಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಇಂದು ಒಟ್ಟು ಏಳು ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಆರ್.ಎಂ.ಕುಬೇರಪ್ಪ ದ್ವಿಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿಯಾಗಿ ಎಸ್.ವಿ. ಸಂಕನೂರ, ಜೆಡಿಎಸ್ ಅಭ್ಯರ್ಥಿಯಾಗಿ ಶಿವಶಂಕರ ಕಲ್ಲೂರ, ಆಜಾದ್ ಮಜೂರ್ ಕಿಸಾನ್ ಪಾರ್ಟಿ ಅಭ್ಯರ್ಥಿಯಾಗಿ ಪ್ರಕಾಶ ಕಾಂಬಳೆ ನಾಮಪತ್ರ ಸಲ್ಲಿಸಿದರು.
ಸ್ವತಂತ್ರ ಅಭ್ಯರ್ಥಿಗಳಾಗಿ ಶಿವಕುಮಾರ್ ತಳವಾರ, ಬಸವರಾಜ ತೇರದಾಳ, ಚರಣರಾಜ್ ಕೆ.ಎ. ನಾಮಪತ್ರ ಸಲ್ಲಿಸಿದ್ದಾರೆ. ಅಭ್ಯರ್ಥಿಗಳ ನಾಮಪತ್ರಗಳನ್ನು ಸಹಾಯಕ ಚುನಾವಣಾಧಿಕಾರಿಗಳಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸ್ವೀಕರಿಸಿದರು.
Kshetra Samachara
07/10/2020 07:55 pm