ನವಲಗುಂದ: ತಾಲೂಕಿನ ಕರ್ಲವಾಡ ಗ್ರಾಮದಲ್ಲಿ “ಜಲಜೀವನ್ ಮಿಷನ್” ಯೋಜನೆಯಲ್ಲಿ ಅಂದಾಜು 91 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ಅಳವಡಿಸುವುದು ಮತ್ತು ಮನೆಗಳಿಗೆ ನಳಗಳ ಜೋಡಣೆ ಕಲ್ಪಿಸುವ ಕಾಮಗಾರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮದ ಗುರು-ಹಿರಿಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಅನೇಕ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
04/11/2021 02:27 pm