ನವಲಗುಂದ : “ಜಲಜೀವನ್ ಮಿಷನ್” ಯೋಜನೆ ಅಡಿಯಲ್ಲಿ ನವಲಗುಂದ ತಾಲೂಕಿನ ಬಳ್ಳೂರ ಗ್ರಾಮದಲ್ಲಿ ಅಂದಾಜು 80 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ಅಳವಡಿಸುವುದು ಮತ್ತು ಮನೆಗಳಿಗೆ ನಳಗಳ ಜೋಡಣೆ ಕಲ್ಪಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ಸಚಿವ ಮುನೇನಕೊಪ್ಪ ಅವರು ಗ್ರಾಮಗಳಲ್ಲಿ ಜಲಧಾರೆ ಮತ್ತು ಜಲಜೀವನ ಮಿಷನ್ ಯೋಜನೆಯ ಅನುದಾನದ ಅಡಿಯಲ್ಲಿ ಅನುಷ್ಠಾನಗೊಳ್ಳಲಿರುವ ಶಾಶ್ವತ ಕುಡಿಯುವ ನೀರಿನ ಯೋಜನೆಯ ಕುರಿತು ಗ್ರಾಮಸ್ಥರಿಗೆ ವಿವರಿಸಿ, ಗ್ರಾಮಸ್ಥರು ಕುಡಿಯುವ ನೀರಿನ ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
Kshetra Samachara
12/10/2021 03:07 pm