ಹುಬ್ಬಳ್ಳಿ- ಧಾರವಾಡ ಜಿಲ್ಲೆಯಲ್ಲಿ ಎರಡನೇ ಹಂತದ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಎರಡನೇ ಹಂತದಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ, ಅಣ್ಣಿಗೇರಿ, ನವಲಗುಂದ ಹಾಗೂ ಕುಂದಗೋಳ ತಾಲೂಕಿನ 71 ಗ್ರಾಮ ಪಂಚಾಯತ್ ಗಳಿಗೆ ನಾಳೆ ಚುನಾವಣೆ ನಡೆಯಲಿದೆ. ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ 68 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, 2981 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ನಾಲ್ಕು ತಾಲೂಕಿನ 347 ಕ್ಷೇತ್ರಗಳಲ್ಲಿ 991 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಶಾಂತಿಯುತ ಮತದಾನಕ್ಕಾಗಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಮತದಾರರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ ಮಾಡಿಕೊಂಡಿದ್ದಾರೆ.
Kshetra Samachara
26/12/2020 09:27 pm