ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ, ಹುಬ್ಬಳ್ಳಿ, ಅಣ್ಣಿಗೇರಿ ಹಾಗೂ ಕುಂದಗೋಳ ತಾಲೂಕಿನಾದ್ಯಂತ ಇಂದು ನಡೆದ ಎರಡನೇ ಹಂತದ ಗ್ರಾಮ ಪಂಚಾಯ್ತಿ ಚುನಾವಣೆ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.
ಬೆಳಿಗ್ಗೆ 7 ರಿಂದ ಸಂಜೆ 5ರ ವರೆಗೆ ವಿವಿಧ ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಯಿತು.
ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಹುಬ್ಬಳ್ಳಿ ತಾಲ್ಲೂಕಿನಲ್ಲಿ ಶೇ 79.90 ರಷ್ಟು, ಕುಂದಗೋಳ ತಾಲೂಕಿನಲ್ಲಿ ಶೇ.79.81 ರಷ್ಟು,
ಅಣ್ಣಿಗೇರಿ ತಾಲೂಕಿನಲ್ಲಿ ಶೇ.81.52 ರಷ್ಟು ಹಾಗೂ ನವಲಗುಂದ ತಾಲೂಕಿನಲ್ಲಿ ಶೇ. 76.75 ರಷ್ಟು ಮತದಾನವಾಗಿದೆ.
ಒಟ್ಟಾರೆ ಧಾರವಾಡ ಜಿಲ್ಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಶೇ.79.50 ರಷ್ಟು ಮತದಾನವಾಗಿದೆ.
Kshetra Samachara
27/12/2020 08:09 pm