ಧಾರವಾಡ: ಜಿಲ್ಲೆಯಲ್ಲಿ ಗ್ರಾಮ ಪಂಚಾಯತ ಸಾರ್ವತ್ರಿಕ ಚುನಾವಣೆಗಳ ಮತ ಎಣಿಕೆ ಕಾರ್ಯವು ನಾಳೆ ಜರುಗುವ ಹಿನ್ನೆಲೆಯಲ್ಲಿ ಮತ ಎಣಿಕೆಯು ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರಗುವ ಹಿತದೃಷ್ಠಿಯಿಂದ ಮತಗಳ ಎಣಿಕೆಯ ದಿವಸದಂದು ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಹಾಗೂ ಮದ್ಯ ಸಂಗ್ರಹಣೆಯನ್ನು ನಿಷೇಧಿಸಿ, ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಧಾರವಾಡ ಜಿಲ್ಲೆಯ ಧಾರವಾಡ ಗ್ರಾಮೀಣ, ಅಳ್ನಾವರ, ಹುಬ್ಬಳ್ಳಿ ಗ್ರಾಮೀಣ, ಕಲಘಟಗಿ, ಕುಂದಗೋಳ, ನವಲಗುಂದ ಮತ್ತು ಅಣ್ಣಿಗೇರಿ ತಾಲೂಕಿನ ವ್ಯಾಪ್ತಿಯಲ್ಲಿ (ಹುಬ್ಬಳ್ಳಿ ಧಾರವಾಡ ಮಹಾನಗರ, ಪುರ ಸಭೆ ಮತ್ತು ಪಟ್ಟಣ ಪಂಚಾಯತ ವ್ಯಾಪ್ತಿ ಹೊರತುಪಡಿಸಿ) ಡಿಸೆಂಬರ್ 29ರ ರಾತ್ರಿ 11-59 ಗಂಟೆಯಿಂದ ಡಿಸೆಂಬರ್ 31 ರ ಬೆಳಿಗ್ಗೆ 6 ಗಂಟೆಯವರೆಗೆ ಮತ ಎಣಿಕೆ ಜರಗುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಹಾಗೂ ಮದ್ಯ ಸಂಗ್ರಹಣೆಯನ್ನು ನಿಷೇಧಿಸಿ, ಈ ದಿನಗಳನ್ನು ಶುಷ್ಕ ದಿನಗಳೆಂದು ಜಿಲ್ಲಾಧಿಕಾರಿ ಘೋಷಿಸಿ ಆದೇಶಿಸಿದ್ದಾರೆ.
Kshetra Samachara
29/12/2020 07:15 pm