ಅಣ್ಣಿಗೇರಿ: ಇದೇ ಡಿ.27ರಂದು ನಡೆದ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಬುಧವಾರ ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಬೆಳಿಗ್ಗೆ 8 ಗಂಟೆಯಿಂದ ನಡೆಯಲಿದೆ.
ತಾಲೂಕಿನ 8 ಗ್ರಾಮ ಪಂಚಾಯಿತಿಯ 109 ಸ್ಥಾನಗಳಿಗೆ 322 ಅಭ್ಯರ್ಥಿಗಳು ಸ್ಪರ್ಧೆಯಲ್ಲಿ ಉಳಿದಿದ್ದಾರೆ. ಮತ ಎಣಿಕೆಗೆ ಬೇಕಾಗುವ ಎಲ್ಲ ಸಕಲ ಸೌಲಭ್ಯಗಳನ್ನು ತಾಲೂಕಾಡಳಿತ ಒದಗಿಸಿದೆ. ಮತ ಎಣಿಕೆ ಕೇಂದ್ರದ ಸುತ್ತ ಬೀಗಿ ಪೊಲೀಸ್ ಬಂದೋಬಸ್ತ್ ಅನ್ನು ಪೊಲೀಸ್ ಇಲಾಖೆ ಒದಗಿಸಿದೆ ಎಂದು ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿಯೂ ಆದ ಕೊಟ್ರೇಶ್ವರ ಗಾಳಿ ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿದರು.
Kshetra Samachara
29/12/2020 09:09 pm