ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಾರ್ಮಿಕ ವಿರೋಧಿ ಕಾನೂನು ಬೇಡ:ಕಾರ್ಮಿಕ ಹಿತ ಕಾಪಾಡಲು ಕಾಯಿದೆ ಜಾರಿ ಮಾಡಿ

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಎಪಿಎಂಸಿ ಹಮಾಲಿ ಕಾರ್ಮಿಕರ ಒಕ್ಕೂಟದ ಸದಸ್ಯರು ಸಿಐಟಿಯು ನೇತೃತ್ವದಲ್ಲಿ ಇಂದು ರೈತ ಕಾರ್ಮಿಕ ವಿರೋಧಿ ಹೊಸ ಕಾನೂನುಗಳ ಪ್ರತಿಗಳನ್ನು ಧಹಿಸಿ ಎಪಿಎಂಸಿ ಯಾರ್ಡ್ ನಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರ ಕೂಡಲೇ ಈ ಜನವಿರೋಧಿ ಕಾನೂನುಗಳನ್ನು ವಾಪಸ್ಸು ಪಡೆಯಲು ಆಗ್ರಹಿಸಿದರು.

ಇದೇ ವೇಳೆ ಎಪಿಎಂಸಿ ಕಾರ್ಯದರ್ಶಿ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ರೈತ ವಿರೋಧಿ ಕೃಷಿ ಕಾಯಿದೆಗಳನ್ನು ಹಾಗೂ ಜನ ವಿರೋಧಿ ವಿದ್ಯುತ್ ಮಸೂದೆಯನ್ನು ಹಿಂಪಡೆಯಲು ಒತ್ತಾಯಿಸಿ ದೇಶದ ರೈತ ಸಮೂಹವು ದೆಹಲಿ ಸೇರಿದಂತೆ ದೇಶದಾಧ್ಯಂತ ನಡೆಸುತ್ತಿರುವ ಹೋರಾಟ ತೀವ್ರವಾಗುತ್ತಿದೆ. ಇದೇ ಸಂದರ್ಭದಲ್ಲಿ ಬಂಡವಾಳಶಾಹಿ ಪರವಾಗಿರುವ 4 ಕಾರ್ಮಿಕ ಸಂಹಿತೆಗಳನ್ನು ರದ್ಧುಗೊಳಿಸಲು ಒತ್ತಾಯಿಸಿದರು.

ರಾಜ್ಯಾದ್ಯಂತ ಸಂಘಟಿತ ಕಾರ್ಮಿಕರು ಪ್ರತಿ ಕಾರ್ಖಾನೆಗಳ ಎದುರು ಹಾಗೂ ಬಿಸಿಯೂಟ, ಅಂಗನವಾಡಿ, ಗ್ರಾಮ ಪಂಚಾಯತ, ಹಮಾಲಿ, ಬೀದಿಬದಿ, ಬೀಡಿ, ಕಟ್ಟಡ ಮುಂತಾದ ಅಸಂಘಟಿತ ಕಾರ್ಮಿಕರು ಮತ್ತು ವಿವಿಧ ಗುತ್ತಿಗೆ ಕಾರ್ಮಿಕರು ತಮ್ಮ ಕೆಲಸದ ಸ್ಥಳಗಳಲ್ಲಿ ಕರಾಳ ಕಾನೂನುಗಳಾದ 4 ಕಾರ್ಮಿಕ ಸಂಹಿತೆಗಳು, ಮೂರು ಕೃಷಿ ಕಾನೂನುಗಳು ಹಾಗು ವಿದ್ಯುತ್ ಕಾನೂನುಗಳ ಪ್ರತಿಗಳನ್ನು ಸುಡುವುದರ ಮೂಲಕ ಪ್ರತಿಭಟನೆ ನಡೆಸಲಾಗುತ್ತಿದೆ.

ಹೊಸ ವರ್ಷದ ದಿನವನ್ನು “ಕಾರ್ಮಿಕ ಹಕ್ಕುಗಳನ್ನು ಉಳಿಸುತ್ತೇವೆ, ರೈತರ ಬದುಕನ್ನು ರಕ್ಷಿಸುತ್ತೇವೆ, ಕಾರ್ಫೋರೇಟ್ ಹಿಡಿತದಿಂದ ದೇಶವನ್ನು ಕಾಪಾಡುತ್ತೇವೆ.” ಎಂಬ ಪ್ರತಿಜ್ಞೆ ಯೊಂದಿಗೆ ಸ್ವಾಗತಿಸಲಾಯಿತು.

Edited By : Nagesh Gaonkar
Kshetra Samachara

Kshetra Samachara

01/01/2021 03:21 pm

Cinque Terre

20.5 K

Cinque Terre

0

ಸಂಬಂಧಿತ ಸುದ್ದಿ