ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರೈಲ್ವೆ ಕೆಳ ಸೇತುವೆಗಳ ಕಾಮಗಾರಿ ಶೀಘ್ರ ಪೂರ್ಣ- ಶೆಟ್ಟರ್ ಭರವಸೆ

ಹುಬ್ಬಳ್ಳಿ: ಇಲ್ಲಿನ ಉಣಕಲ್ ರೈಲ್ವೆ ನಿಲ್ದಾಣ ಬಳಿ ನೂತನವಾಗಿ ನಿರ್ಮಾಣವಾಗಲಿರುವ ರೈಲ್ವೆ ಕೆಳ ಸೇತುವೆಯನ್ನು ನಾಲ್ಕು ತಿಂಗಳೊಳಗೆ ಹಾಗೂ ಇಲ್ಲಿನ ದೇಶಪಾಂಡೆನಗರ ಹಾಗೂ ಭವಾನಿನಗರ ಮಧ್ಯೆ ಸಂಪರ್ಕ ಕಲ್ಪಿಸುವ ರೈಲ್ವೆ ಕೆಳ ಸೇತುವೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಭರವಸೆ ನೀಡಿದ್ದಾರೆ.

ದೇಶಪಾಂಡೆ ನಗರ ಶ್ರೀಕೃಷ್ಣ ಮಂದಿರಬಳಿ ನಿರ್ಮಾಣವಾಗುತ್ತಿರುವ ರೈಲ್ವೆ ಕೆಳ ಸೇತುವೆ ಹಾಗೂ ಉಣಕಲ್ ರೈಲ್ವೆ ನಿಲ್ದಾಣದ ಸಮೀಪ ನಿರ್ಮಿಸಲು ಉದ್ದೇಶಿಸಲಾಗಿರುವ ನೂತನ ಕೆಳ ಸೇತುವೆ ನಿರ್ಮಾಣ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರ ಕಾಳಜಿ ಮತ್ತು ಸಹಕಾರದಿಂದ ದೇಶಪಾಂಡೆ ನಗರ ಹಾಗೂ ಭವಾನಿನಗರ ಮಧ್ಯೆ ಸಂಪರ್ಕ ಕಲ್ಪಿಸುವ ರೈಲ್ವೆ ಕೆಳ ಸೇತುವೆಯ ಕಾಮಗಾರಿಯನ್ನು 4.5 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಇನ್ನು ಒಂದು ತಿಂಗಳ ಅವಧಿಯಲ್ಲಿ ಈ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.

Edited By : Vijay Kumar
Kshetra Samachara

Kshetra Samachara

03/01/2021 03:24 pm

Cinque Terre

32.09 K

Cinque Terre

1

ಸಂಬಂಧಿತ ಸುದ್ದಿ