ಧಾರವಾಡ: ರಾಜ್ಯದಲ್ಲಿರುವ ಖಾದಿ ಸಂಸ್ಥೆಗಳಿಗೆ ಬಾಕಿ ಇರುವ ಅನುದಾನ ಬಿಡುಗಡೆ ಮಾಡುವುದು ಹಾಗೂ ಎಂಡಿಎ ಬಿಡುಗಡೆ ಮಾಡುವಂತೆ ಆಗ್ರಹಿಸಿ ಧಾರವಾಡ ತಾಲೂಕಾ ಸೇವಾ ಸಂಘದ ಸದಸ್ಯರು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶಾಲಾ ಮಕ್ಕಳಿಗೆ ಸಮವಸ್ತ್ರವನ್ನಾಗಿ ಖಾದಿ ಬಟ್ಟೆಯನ್ನೇ ಪೂರೈಸಬೇಕು. ಕಾಲೇಜು ವಿಶ್ವವಿದ್ಯಾಲಯಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಖಾದಿ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ಒತ್ತಾಯಿಸಿದರು.
ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ 1 ದಿನ ಖಾದಿ ಸಮವಸ್ತ್ರವನ್ನು ಕಡ್ಡಾಯಗೊಳಿಸಬೇಕು. ಖಾದಿ ಮಂಡಳಿಗೆ ಪ್ರತ್ಯೇಕ ಬಜೆಟ್ ಘೋಷಿಸಬೇಕು. ಈಗಾಗಲೇ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯ ಸರ್ಕಾರಗಳು ಖಾದಿ ಸಮವಸ್ತ್ರ ಕಡ್ಡಾಯಗೊಳಿಸಿವೆ. ಇದೇ ಮಾದರಿ ನಮ್ಮ ರಾಜ್ಯದಲ್ಲೂ ಅನುಷ್ಠಾನಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.
Kshetra Samachara
07/01/2021 01:38 pm