ಧಾರವಾಡ: ನಮಗೆ ಸಂಪೂರ್ಣ ಬಹುಮತ ಸಿಕ್ಕಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಅನೇಕ ಶಾಸಕರು ಬಂದಿದ್ದಾರೆ. ಅವರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಅವರಿಗೆ ಹೈಕಮಾಂಡ್ ಬುಲಾವ್ ಬಂದಿದೆ. ಹೈಕಮಾಂಡ್ ಒಳ್ಳೆಯ ನಿರ್ಧಾರವನ್ನೇ ತೆಗೆದುಕೊಳ್ಳುತ್ತಾರೆ ಎಂದರು.
ಸಂಕ್ರಾಂತಿ ನಂತರ ಬೇರೆ ವಿಚಾರ ಇದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಯತ್ನಾಳ ಅವರ ಹೇಳಿಕೆಗೆ ಪಕ್ಷದ ರಾಜ್ಯ ಅಧ್ಯಕ್ಷರಾದ ನಳೀನಕುಮಾರ ಕಟೀಲ್ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ ಎಂದರು.
Kshetra Samachara
10/01/2021 02:51 pm