ಧಾರವಾಡ: ಧಾರವಾಡದಲ್ಲಿ ನಿರ್ಮಾಣವಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಯನ್ನು ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಖಾತೆ ಸಚಿವ ಗೋವಿಂದ ಕಾರಜೋಳ ವೀಕ್ಷಿಸಿದರು.
ಕಟ್ಟಡ ಕಾಮಗಾರಿಯಲ್ಲಿ ಲೋಪದೋಷಗಳಿದ್ದಲ್ಲಿ ಸರಿಪಡಿಸಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕೋಪಯೋಗಿ ಅಧೀಕ್ಷಕ ಎಂಜಿನಿಯರ್ ಶಿವಾನಂದ ನಾಯಕ್, ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಬಿ.ಚೌಡಣ್ಣವರ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿ.ಎನ್.ಪಾಟೀಲ ಮತ್ತಿತರರು ಇದ್ದರು.
Kshetra Samachara
10/01/2021 04:17 pm