ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಳ್ನಾವರ ತಾಲೂಕಿನ 4 ಗ್ರಾಮ ಪಂಚಾಯತಿಗಳಿಗೆ ಮೀಸಲಾತಿ ಪ್ರಕಟ

ಧಾರವಾಡ: ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಅಳ್ನಾವರ ತಾಲೂಕಿನ 4 ಗ್ರಾಮ ಪಂಚಾಯತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕಟವಾಗಿದೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇಂದು ಬೆಳಿಗ್ಗೆ ಅಳ್ನಾವರ ಪಟ್ಟಣದ ಉಮಾ ಭವನದಲ್ಲಿ ಗ್ರಾಮ ಪಂಚಾಯತ್ ನೂತನ ಸದಸ್ಯರ ಸಭೆ ಜರುಗಿಸಿ, ಅವರ ಸಮ್ಮುಖದಲ್ಲಿ ಮೀಸಲಾತಿ ನಿಗದಿಪಡಿಸಿ ಪ್ರಕಟಿಸಿದರು.

ಕಡಬಗಟ್ಟಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳಾ ಮೀಸಲಾತಿ, ಅರವಟಗಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗದ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗ, ಬೆಣಚಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗದ ಮಹಿಳೆ, ಹೊನ್ನಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗಕ್ಕೆ ಮೀಸಲಾತಿಯನ್ನು ನಿಗದಿಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಕಟಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

12/01/2021 01:42 pm

Cinque Terre

12.05 K

Cinque Terre

0

ಸಂಬಂಧಿತ ಸುದ್ದಿ