ಹುಬ್ಬಳ್ಳಿ: ಹು-ಧಾ ಮಹಾನಗರ ಜಿಲ್ಲೆಯ ಜೆಡಿಎಸ್ ಅಧ್ಯಕ್ಷರಾಗಿದ್ದ ರಾಜಣ್ಣ ಕೊರವಿ ಅವರು ಜೆಡಿಎಸ್ ಪಕ್ಷಕ್ಕೆ ಹಾಗೂ ಅವರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹು-ಧಾ ಮಹಾನಗರ ಪಾಲಿಕೆ ಮಾಜಿ ಸದಸ್ಯರಾಗಿರುವ ರಾಜಣ್ಣ ಕೊರವಿ ಅವರು ಈಗಾಗಲೇ ಪಕ್ಷದ ವರಿಷ್ಠರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಈ ಕುರಿತು ಪಬ್ಲಿಕ್ ನೆಕ್ಸ್ಟ್ ಜೊತೆಗೆ ದೂರವಾಣಿ ಮೂಲಕ ಪ್ರತಿಕ್ರಿಯಿಸಿದ ಅವರು, ''ಈಗ ನಾನು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ನನ್ನ ರಾಜೀನಾಮೆ ಪತ್ರವನ್ನು ಮಾಜಿ ಪ್ರಧಾನಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸೇರಿದಂತೆ ಪಕ್ಷದ ಬಹುತೇಕ ಮುಖಂಡರಿಗೆ ಕಳಿಸಿದ್ದೇನೆ. ಯಾವುದೇ ಪಕ್ಷಕ್ಕೂ ಅಧಿಕೃತವಾಗಿ ಸೇರ್ಪಡೆಯಾಗಿಲ್ಲ. ಸಂಕ್ರಾಂತಿ ಬಳಿಕ ಸುದ್ದಿಗೋಷ್ಠಿ ನಡೆಸಿ ವಿವರಣೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.
Kshetra Samachara
12/01/2021 10:53 pm