ಕುಂದಗೋಳ : ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಕುಂದಗೋಳ ತಾಲೂಕಿನ 26 ಗ್ರಾಮ ಪಂಚಾಯತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇಂದು ಬೆಳಿಗ್ಗೆ ಕುಂದಗೋಳ ಪಟ್ಟಣದ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ತಾಲೂಕು ಆಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾಮ ಪಂಚಾಯತ್ ನೂತನ ಸದಸ್ಯರ ಸಭೆ ಜರುಗಿಸಿ, ಅವರ ಸಮ್ಮುಖದಲ್ಲಿಯೇ ಮೀಸಲಾತಿ ನಿಗದಿಪಡಿಸಿ ಪ್ರಕಟಿಸಿದರು.
ಕುಂದಗೊಳ ತಾಲೂಕಿನ 26 ಗ್ರಾಮಪಂಚಾಯತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ವಿವರ : ರೊಟ್ಟಿಗವಾಡ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಕಮಡೊಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ, ಯಲಿವಾಳ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಸಂಶಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಯರಗುಪ್ಪಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಕೂಬಿಹಾಳ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಇಂಗಳಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ, ಹಿರೇಹರಕುಣಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಬೆಟದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಗುಡೇನಕಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆ, ಯರೇಬೂದಿಹಾಳ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ, ಹಿರೇಗುಂಜಾಳ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಶಿರೂರ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ರಾಮನಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗ ಮಹಿಳೆ, ಭು-ತರ್ಲಘಟ್ಟ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ ಮಹಿಳೆ, ಮತ್ತಿಗಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ, ಕಳಸ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಹರ್ಲಾಪೂರ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಗೌಡಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಗುಡಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ, ದೇವನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ, ಮಳಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗ, ಗುರುವಿನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ, ಪಶುಪತಿಹಾಳ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ, ಚಾಕಲಬ್ಬಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಹಿರೇನರ್ತಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮೀಸಲಾತಿಯನ್ನು ನಿಗದಿಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಕಟಿಸಿದ್ದಾರೆ.
Kshetra Samachara
13/01/2021 03:29 pm