ಹುಬ್ಬಳ್ಳಿ: - ಹುಬ್ಬಳ್ಳಿಯ ಕೇಂದ್ರ ಬಿಂಧುವಾಗಿರುವ ಚನ್ನಮ್ಮ ವೃತ್ತದಲ್ಲಿ ಚತುಷ್ಪತ ರಸ್ತೆಯ ಫ್ಲೈಓವರ್ ನಿರ್ಮಾಣದ ನೀಲನಕ್ಷೆಯಲ್ಲಿ ಮಹಾನಗರಕ್ಕೆ ಕಳಸಪ್ರಾಯದಂತಿರುವ ಕಿತ್ತೂರು ರಾಣಿ ಚನ್ನಮ್ಮನ ಪುತ್ಥಳಿಯನ್ನು ಮೇಲಕ್ಕೇರಿಸದೆ ತೀವ್ರ ಅವಮಾನ ಮಾಡಲಾಗಿದೆ ಎಂದು ಕೆಪಿಸಿಸಿ ಸಂಯೋಜಕ, ಹುಬ್ಬಳ್ಳಿ -ಧಾರವಾಡ ಮಹಾನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿಮಠ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ರಾಜಕೀಯ ಮುಖಂಡರಿಗೆ ಮನವಿ ಮಾಡಿದ್ದಾರೆ...
ಈ ಕುರಿತು ಹೇಳಿಕೆ ನೀಡಿರುವ ಅವರು, ಇಲ್ಲಿಯ ಚತುಷ್ಪತ ಫ್ಲೈ ಓವರ್ ರಸ್ತೆ ನಿರ್ಮಾಣಕ್ಕೆ ನಾಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪೂಜೆ ಸಲ್ಲಿಸಲಿದ್ದಾರೆ. ಇದಕ್ಕಾಗಿ ನಗರದ ತುಂಬೆಲ್ಲ ಬ್ಯಾನರ್ ಗಳನ್ನು ಹಾಕಲಾಗಿದೆ. ಆದರೆ ರಸ್ತೆ ನಿರ್ಮಾಣಕ್ಕೆ ಮಾಡಲಾಗಿರುವ ನೀಲನಕ್ಷೆಯಲ್ಲಿ ಚನ್ನಮ್ಮನ ಪುತ್ಥಳಿಯನ್ನು ರಸ್ತೆಗಿಂತ ಕೆಳಗೆ ಕಾಣಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯ ಅಭಿವೃದ್ಧಿ ವಿಷಯದಲ್ಲಿ ನಾವು ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುತ್ತೇವೆ. ಆದರೆ ಅದೇ ಸಮಯದಲ್ಲಿ ಇಂತಹ ಮಹಾನ್ ನಾಯಕಿಗೆ ಅಗೌರವ ತೋರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಸಿದ್ದಾರೆ. ಇದಕ್ಕೂ ಮೊದಲು ಚೆನ್ನಮ್ಮರ ಪುತ್ಥಳಿಗೆ ಧಕ್ಕೆಯಾಗದಂತೆ ಸೂಕ್ತವಾದ ಪರಿಹಾರವನ್ನು ಕಂಡುಕೊಳ್ಳಬೇಕೆಂದು ಮನವಿ ಮಾಡಿದರು....
Kshetra Samachara
14/01/2021 08:20 pm