ಹುಬ್ಬಳ್ಳಿ: ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹನುಮಂತ ಹೂಗಾರ (74) ಅವರ ನಿಧನಕ್ಕೆ ಬೃಹತ್, ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಹನುಮಂತ ಅವರು ವಿಶ್ವವಾಣಿ, ಪ್ರಪಂಚ ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ಮಹಾನಗರ ಪಾಲಿಕೆ ಸದಸ್ಯರಾಗಿಯೂ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು. ಅವರ ನಿಧನವು ದೊಡ್ಡ ನಷ್ಟವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿ ಬರಲಿ ಎಂದು ಸಚಿವರು ತಿಳಿಸಿದ್ದಾರೆ.
ಹಿರಿಯ ಪತ್ರಕರ್ತ ಹನುಮಂತ ಹೂಗಾರ ಅವರ ನಿಧನಕ್ಕೆ ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ತೀವ್ರ ಕಂಬನಿ ಮಿಡಿದಿದ್ದಾರೆ. ಹೂಗಾರ ಅವರು ವೈಯಕ್ತಿಕವಾಗಿಯೂ ಓರ್ವ ಹಳೆಯ ಉತ್ತಮ ಸ್ನೇಹಿತರಾಗಿದ್ದರು. ಉತ್ತರ ಕರ್ನಾಟಕದ ಜನರ ಧ್ವನಿಯಾಗಿ ಪತ್ರಿಕಾರಂಗದಲ್ಲಿ ಅಪಾರ ಸೇವೆ ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ.
Kshetra Samachara
15/01/2021 04:47 pm