ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯ ಅಭಿವೃದ್ಧಿಗೆ ಆಧ್ಯತೆ: ಶೆಟ್ಟರ್

ಧಾರವಾಡ: ಭಾರತ ಸರ್ಕಾರದ ಜಲಜೀವನ ಮಿಷನ್ ಯೋಜನೆಯ ಸಹಕಾರದಲ್ಲಿ ರಾಜ್ಯ ಸರ್ಕಾರವು ಜಲಧಾರೆ ಯೋಜನೆ ಮೂಲಕ ಧಾರವಾಡ ಜಿಲ್ಲೆಯ ಪ್ರತಿ ಗ್ರಾಮದ ಪ್ರತಿ ಮನೆಗೆ ಮಲಪ್ರಭಾ ನದಿಯ ಕುಡಿಯುವ ನೀರನ್ನು ಸರಬರಾಜು ಮಾಡಲು ಯೋಜನೆ ಸಿದ್ಧಗೊಳಿಸಿದ್ದು, ಅನುಷ್ಠಾನ ಹಂತದಲ್ಲಿದೆ. ಜಿಲ್ಲೆಯ ಅಭಿವೃದ್ಧಿಗೆ ಆಧ್ಯತೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಅವರು ಇಂದು ಮಧ್ಯಾಹ್ನ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನೂತನ ಬಸ್‍ನಿಲ್ದಾಣ ಉದ್ಘಾಟನೆ, ಗರಗ ಗ್ರಾಮದ ಪರಿಮಿತಿಯಲ್ಲಿ ರಸ್ತೆ ಅಗಲೀಕರಣ ಹಾಗೂ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ತುಪ್ಪರಿಹಳ್ಳ ಹಾಗೂ ಬೆಣ್ಣೆಹಳ್ಳದ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಡಿಪಿಆರ್ ತಯಾರಾಗಿದೆ. ಕೊರೊನಾದಂತಹ ಸಂದಿಗ್ಧ ಮತ್ತು ಸಂಕಷ್ಟ ಸಂದರ್ಭದಲ್ಲಿಯೂ ಸ್ಥಳೀಯ ಶಾಸಕರ ಪ್ರಯತ್ನದಿಂದಾಗಿ ಮತ್ತು ಜಿಲ್ಲೆಯ ಸಚಿವರ ಸಹಭಾಗಿತ್ವದಲ್ಲಿ ರಾಜ್ಯ ಸರ್ಕಾರದಿಂದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಧಾರವಾಡ ಜಿಲ್ಲೆಯನ್ನು ಕೈಗಾರಿಕಾ ದೃಷ್ಟಿಯಿಂದ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದ್ದು, ಏಕಸ್ ಮತ್ತು ಯುಕ್ಲೆಸ್ ಕೈಗಾರಿಕೆಗಳು ಧಾರವಾಡ ಜಿಲ್ಲೆಯ ಇಟಗಟ್ಟಿ ಹಾಗೂ ಮುಮ್ಮಿಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆಗೊಳ್ಳಲಿದ್ದು, ಸುಮಾರು 5 ಸಾವಿರ ಕೋಟಿ ಬಂಡವಾಳವನ್ನು ಹೂಡಲಾಗಿದ್ದು, ಅವು ಒಂದು ವರ್ಷದಲ್ಲಿ ಕಾರ್ಯಾರಂಭ ಮಾಡಲಿವೆ. ಇದರಿಂದ ಸ್ಥಳೀಯವಾಗಿ ಸುಮಾರು 20 ಸಾವಿರ ಉದ್ಯೋಗ ಸೃಷ್ಟಿಯಾಗಲಿವೆ ಎಂದು ಅವರು ಹೇಳಿದರು.

ಗರಗ ಗ್ರಾಮದಲ್ಲಿ ಸುಮಾರು 50 ಲಕ್ಷ ವೆಚ್ಚದಲ್ಲಿ ನೂತನ ಬಸ್‍ ನಿಲ್ದಾಣವನ್ನು ನಿರ್ಮಿಸಲಾಗಿದೆ. ಮತ್ತು ಲೋಕೋಪಯೋಗಿ ಇಲಾಖೆಯಿಂದ ಗರಗ ಗ್ರಾಮ ಪರಿಮಿತಿಯಲ್ಲಿ ಸುಮಾರು ರೂ.330 ಲಕ್ಷ ಅಂದಾಜು ವೆಚ್ಚದಲ್ಲಿ 1 ಕಿ.ಮೀ. ರಸ್ತೆ ಅಗಲೀಕರಣ ಹಾಗೂ ಸುಧಾರಣೆ ಮತ್ತು ರಸ್ತೆ ಮಧ್ಯದಲ್ಲಿ ದೀಪಗಳ ಅಳವಡಿಕೆ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ ಜೋಶಿ ಅವರು ಮಾತನಾಡಿ, ಮುಂದಿನ ಮೂರು ವರ್ಷದಲ್ಲಿ ಭಾರತ ಸರ್ಕಾರದ ಜಲಜೀವನ್ ಮೀಷನ್ ಯೋಜನೆಯಡಿ ಸುಮಾರು 14 ನೂರು ಕೋಟಿ ವೆಚ್ಚದಲ್ಲಿ ಮನೆಗಳಿಗೆ ನಳದ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆಯಡಿ ಸುಮಾರು 15 ಕೋಟಿ ವೆಚ್ಚದಲ್ಲಿ 153 ಕೊಠಡಿಗಳನ್ನು ನಿರ್ಮಿಸಲಾಗಿದೆ. ಮತ್ತು ವಿವಿಧ ಶಾಲೆಗಳಿಗೆ ಕೈಗಾರಿಕೆ, ಕಂಪೆನಿಗಳ ಸಹಾಯದಲ್ಲಿ ಡೆಸ್ಕ್ ಗಳನ್ನು ವಿತರಿಸಲಾಗಿದೆ. ಸ್ವಚ್ಛ ಭಾರತ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಸುಮಾರು 24 ಸಾವಿರ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಮತ್ತು ಭಾರತ ಸರ್ಕಾರದ ಉಜ್ವಲ ಯೋಜನೆಯಡಿ 6 ಸಾವಿರ ಕುಟುಂಬಗಳಿಗೆ ಉಚಿತವಾಗಿ ಗ್ಯಾಸ್ ವಿತರಿಸಲಾಗಿದೆ. ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆಯಡಿ 165 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. 2022 ರ ಹೊತ್ತಿಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ದೃಷ್ಟಿಯಿಂದ ಅನೇಕ ಕಾರ್ಯಕ್ರಮಗಳನ್ನು ಮತ್ತು ಹೊಸ ಕಾನೂನುಗಳನ್ನು ರೂಪಿಸಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ರೈತರ ಉತ್ಪನ್ನಗಳಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬೆಂಬಲ ಬೆಲೆ ನೀಡುವ ಕುರಿತು ಭಾರತ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್. ಪಾಟೀಲ ಇದ್ದರು. ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಿತು.

Edited By : Nagesh Gaonkar
Kshetra Samachara

Kshetra Samachara

15/01/2021 07:30 pm

Cinque Terre

36 K

Cinque Terre

3

ಸಂಬಂಧಿತ ಸುದ್ದಿ