ಕುಂದಗೋಳ : ತಾಲೂಕಿನ ಬು.ತರ್ಲಘಟ್ಟ ಗ್ರಾಮ ಪಂಚಾಯಿತಿ ಅವ್ಯಹಾರದ ತನಿಖೆಗೆ ಆಗ್ರಹಿಸಿ ಮಾಜಿ ಸದಸ್ಯ ಸಿದ್ದಣ್ಣ ಕಳಸಣ್ಣನವರ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷ ಕಲ್ಲಪ್ಪ ಹರಕುಣಿ ಗ್ರಾಮಸ್ಥರ ನೇತೃತ್ವದ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ.
ನಿನ್ನೆ ದಿನ ಶಾಸಕಿ ಕುಸುಮಾವತಿ ಶಿವಳ್ಳಿ ಹಾಗೂ ತಹಶೀಲ್ದಾರ ಬಸವರಾಜ ಮೆಳವಂಕಿ ತಾಪಂ ಅಧಿಕಾರಿಗಳು ಹೋರಾಟಗಾರರನ್ನು ಸಮಾಧಾನ ಪಡಿಸಿ ಅವ್ಯವಹಾರದ ಆರೋಪದ ಅಡಿ ಪಿಡಿಓ ಅಮಾನತಿಗೆ ಆದೇಶಿಸಿದರು, ಅವ್ಯವಹಾರದಲ್ಲಿ ಭಾಗಿಯಾದ ಎಲ್ಲ ಅಧಿಕಾರಿ ಸಿಬ್ಬಂದಿಗಳ ಅಮಾನತಿಗೆ ಪಟ್ಟು ಹಿಡಿದು ಗ್ರಾಮಸ್ಥರು ಪ್ರತಿಭಟನೆ ಮುಂದುವರೆಸಿದ್ದು ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸುವಂತೆ ಜನ ಬೇಡಿಕೆ ಇಟ್ಟಿದ್ದಾರೆ.
Kshetra Samachara
17/01/2021 09:12 pm