ಧಾರವಾಡ: ನರೇಂದ್ರ ಟೋಲ್ ಗೇಟ್ ನಿಂದ ಗಬ್ಬೂರು ಕ್ರಾಸ್ ವರೆಗೆ ರಸ್ತೆ ಅಗಲೀಕರಣ ಮಾಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನರೇಂದ್ರ ಟೋಲ್ ಗೇಟ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಅಶೋಕ ಖೇಣಿ ಒಡೆತನದ ನಂದಿ ಇನ್ಫ್ರಾಸ್ಟ್ರಕ್ಚರ್ ಈ ರಸ್ತೆ ನಿರ್ವಹಣೆ ಮಾಡುತ್ತಿದ್ದು, ಕಳೆದ 25 ವರ್ಷಗಳಿಂದ ಈ ರಸ್ತೆಯಲ್ಲಿ ಸಾವಿರಾರು ಜನ ಅಪಘಾತದಲ್ಲಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಅಶೋಕ ಖೇಣಿ ಹಾಗೂ ಕೇಂದ್ರ ಸರ್ಕಾರ ಕೂಡಲೇ ಈ ರಸ್ತೆಯನ್ನು ಷಟ್ಪಥ್ ರಸ್ತೆಯನ್ನಾಗಿ ಪರಿವರ್ತನೆ ಮಾಡಿ ಸಾವಿನ ರಸ್ತೆಯಾಗಿರುವ ಈ ರಸ್ತೆಯನ್ನು ಸುಗಮ ರಸ್ತೆಯನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಇಸ್ಮಾಯಿಲ್ ತಮಟಗಾರ, ಅನಿಲ್ ಕುಮಾರ ಪಾಟೀಲ, ನಾಗರಾಜ ಗೌರಿ, ಅಲ್ತಾಫ್ ಹಳ್ಳೂರ, ನಾಗರಾಜ ಛಬ್ಬಿ ಸೇರಿದಂತೆ ಅನೇಕರು ಈ ಧರಣಿಯಲ್ಲಿ ಪಾಲ್ಗೊಂಡಿದ್ದರು.
Kshetra Samachara
18/01/2021 12:41 pm