ಹುಬ್ಬಳ್ಳಿ: ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ಧ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು.
ಮಹಾರಾಷ್ಟ್ರ ಸಿಎಂ ವಿರುದ್ಧ ದಿಕ್ಕಾರ ಕೂಗಿ ಅಸಮಾಧಾನ ಹೊರ ಹಾಕಿದರು.ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ ಅವರು, ಠಾಕ್ರೆ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
Kshetra Samachara
18/01/2021 03:09 pm