ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಗ್ರಾ. ಪಂ ಅಧ್ಯಕ್ಷ, ಉಪಾಧ್ಯಕ ಸ್ಥಾನಗಳ ಮೀಸಲಾತಿ ನಿಗದಿಪಡಿಸಿದ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್

ನವಲಗುಂದ : ನವಲಗುಂದ ಪಟ್ಟಣದ ಕೃಷ್ಣ ಕಲ್ಯಾಣ ಮಂಟಪದಲ್ಲಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ತಾಲೂಕಿನ 16 ಗ್ರಾಮ ಪಂಚಾಯತಿಗಳ ಅಧ್ಯಕ್ಷ, ಉಪಾಧ್ಯಕ ಸ್ಥಾನಗಳ ಮೀಸಲಾತಿ ನಿಗದಿಪಡಿಸಿ ಪ್ರಕಟಿಸಿದರು.

ಇನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿ ವಿವರಣೆ ಈ ರೀತಿಯಾಗಿದೆ. ಬೇಳೆಹಾರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆ, ಹಾಳಕುಸುಗಲ್ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ ಮಹಿಳೆ, ತಿರ್ಲಾಪೂರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಗುಡಿಸಾಗರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ತಡಹಾಳ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ, ಜಾವೂರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಶಿರೂರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಮೊರಬ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಯಮನೂರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಕಾಲವಾಡ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಹೆಬ್ಬಾಳ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ, ಶಿರಕೊಳ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ವರ್ಗ ಮಹಿಳೆ, ನಾಯಕನೂರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಬೆಳವಟಗಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ, ಗುಮ್ಮಗೋಳ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ, ಅಳಗವಾಡಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗಕ್ಕೆ ಮೀಸಲಾತಿಯನ್ನು ನಿಗದಿಗೊಳಿಸಿ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಕಟಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

18/01/2021 08:23 pm

Cinque Terre

25.6 K

Cinque Terre

1

ಸಂಬಂಧಿತ ಸುದ್ದಿ