ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ದೆಹಲಿಯ ರೈತರ ಪ್ರತಿಭಟನೆಗೆ ಬೆಂಬಲ

ಧಾರವಾಡ: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ, ಧಾರವಾಡದ ವಿವೇಕಾನಂದ ವೃತ್ತದಲ್ಲಿ ಎಐಕೆಕೆಎಂಎಸ್ ಸಂಘಟನೆಯ ಮಹಿಳಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಎಪಿಎಂಸಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಹಾಗೂ ದೆಹಲಿಯ‌ ರೈತರ ಪ್ರತಿಭಟನೆ ಬೆಂಬಲಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಸಂಘಟನೆ ಹಾಗೂ ರೈತ ಮಹಿಳೆಯ ಸಂಘಟನೆಯ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕಳೆದ ಹಲವು ದಿನಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಅವರ ಕೂಗನ್ನು ಇದುವರೆಗೂ ಕೇಂದ್ರ ಸರ್ಕಾರ ಕೇಳಿಲ್ಲ. ಅಲ್ಲದೇ ಎಪಿಎಂಸಿ ಕಾಯ್ದೆಯು ರೈತರಿಗೆ ಮಾರಕವಾಗಿದೆ. ರೈತರ ವಿರೋಧವಿದ್ದರೂ ಕೂಡ ಕೇಂದ್ರ ಸರ್ಕಾರ ಅದನ್ನು ಹಿಂದಕ್ಕೆ ಪಡೆಯುತ್ತಿಲ್ಲ. ರೈತರಿಗೆ ಮರಣ ಶಾಸನವಾದಂತಹ ಇಂತಹ ಕಾಯ್ದೆಗಳನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

Edited By : Nagesh Gaonkar
Kshetra Samachara

Kshetra Samachara

18/01/2021 10:14 pm

Cinque Terre

26 K

Cinque Terre

2

ಸಂಬಂಧಿತ ಸುದ್ದಿ