ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಿಮ್ಸ್ ಆವರಣದಲ್ಲಿ ಸಚಿವ ಸುಧಾಕರಗೆ ಘೇರಾವ ಹಾಕಿದ ಕರವೇ ಕಾರ್ಯಕರ್ತರು

ಹುಬ್ಬಳ್ಳಿ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಗೆ ಕಪ್ಪು ಬಟ್ಟೆ ತೋರಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ.

ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಡಾ.ಕೆ.ಸುಧಾಕರ ಅವರಿಗೆ ನಾರಾಯಣಗೌಡ ಬಣದ ಕಾರ್ಯಕರ್ತರಿಂದ ಘೇರಾವ್ ಹಾಕಿದರು.ರಾಜ್ಯಾಧ್ಯಕ್ಷ ನಾರಾಯಣಗೌಡ ಅವರ ಬಗ್ಗೆ ಸಚಿವ ಸುಧಾಕರ್ ಹಗುರವಾಗಿ ಮಾತನಾಡಿದ್ದಾರೆಂದು ಆರೋಪದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಸಚಿವರ ಜೊತೆ ಕೆಲಕಾಲ ವಾಗ್ವಾದಕ್ಕಿಳಿದರು.ಕಿಮ್ಸ್ ಆವರಣದಲ್ಲಿ ಕರವೇ ಕಾರ್ಯಕರ್ತರಿಂದ ಹೈಡ್ರಾಮಾ ಸೃಷ್ಟಿಯಾಗಿತು.

ಸಚಿವರ ಜೊತೆ ವಾಗ್ವಾದಕ್ಕಿಳಿದು ಕಾರಿಗೆ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದರು.ಕೂಡಲೇ ನಾರಾಯಣಗೌಡ ಅವರನ್ನ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದ ಕಾರ್ಯಕರ್ತರು.ಸಚಿವರ ಕಾರಿಗೆ ಅಡ್ಡಲಾಗಿ ಮಲಗಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಚಿವರ ವಿರುದ್ಧ ಘೋಷಣೆ ಕೂಗಿ ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿಭಟನೆಗೆ ಮುಂದಾದರು.

Edited By : Manjunath H D
Kshetra Samachara

Kshetra Samachara

19/01/2021 04:51 pm

Cinque Terre

38.25 K

Cinque Terre

15

ಸಂಬಂಧಿತ ಸುದ್ದಿ