ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಹಾ ಸಿಎಂ ವಿರುದ್ಧ ಸಿಡಿದೆದ್ದ ಜಯ ಕರ್ನಾಟಕ

ಧಾರವಾಡ: ಕರ್ನಾಟದ ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ಹಾಗೂ ವಿತಂಡವಾದದ ಅಸಂವಿಧಾನಿಕ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು.

ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಉದ್ಧವ ಠಾಕ್ರೆ ಅವರ ಪ್ರತಿಕೃತಿ ದಹಿಸಿದ ಕಾರ್ಯಕರ್ತರು, ಅವರ ವಿರುದ್ಧ ಘೋಷಣೆ ಕೂಗಿದರು.

ಕರ್ನಾಟಕದಲ್ಲಿ ಇರುವ ಮರಾಠಿಗರು ಕನ್ನಡಿಗರೊಂದಿಗೆ ಸೌಹಾರ್ಧಯುತವಾಗಿ ಬೆರೆತು ಸಹಬಾಳ್ವೆ ನಡೆಸುತ್ತಿದ್ದಾರೆ. ಅಲ್ಲದೇ ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಕನ್ನಡಿಗರು ಸಹಿತ ಮರಾಠಿಗರೊಂದಿಗೆ ಸೌಹಾರ್ಧಯುತ ಹಾಗೂ ಅವಿನಾಭಾವ ಸಂಬಂಧ ಹೊಂದಿದ್ದಾರೆ.

ಆದರೆ, ಉದ್ಧವ ಠಾಕ್ರೆ ಅವರು ಗಡಿ ವಿಚಾರದಲ್ಲಿ ಆಗಾಗ ಪ್ರಚೋದನಕಾರಿ ಹೇಳಿಕೆ ನೀಡುತ್ತಲೇ ಇದ್ದಾರೆ. ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಠಾಕ್ರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Edited By : Manjunath H D
Kshetra Samachara

Kshetra Samachara

20/01/2021 03:40 pm

Cinque Terre

28.75 K

Cinque Terre

0

ಸಂಬಂಧಿತ ಸುದ್ದಿ