ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಾರಕ ಕಾಯ್ದೆ ಕೈ ಬಿಡಿ

ಧಾರವಾಡ: ಕೇಂದ್ರ ಸರ್ಕಾರ ರೈತರಿಗೆ ಮಾರಕವಾಗುವಂತಹ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತರ ಬದುಕನ್ನು ಬೀದಿಗೆ ತರುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಹಾಗೂ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಧರಣಿಗೆ ಬೆಂಬಲಾರ್ಥವಾಗಿ ರೈತ ಪ್ರಗತಿಪರ ಸಂಘಟನೆ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೇಂದ್ರ ಜಾರಿಗೆ ತಂದಿರುವ ಕಾಯ್ದೆಗಳು ಕರಾಳ ಕಾಯ್ದೆಗಳಾಗಿವೆ. ಕೂಡಲೇ ಆ ಕಾಯ್ದೆಗಳನ್ನು ಹಿಂಪಡೆಯಬೇಕು. ದೆಹಲಿಯಲ್ಲಿ ರೈತರು ಐತಿಹಾಸಿಕವಾದ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರ ಕಿಂಚಿತ್ತೂ ಪ್ರತಿಭಟನೆಯತ್ತ ಕಣ್ಣು ಹಾಯಿಸಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಕೇಂದ್ರ ಸರ್ಕಾರದ ಕಣ್ಣು, ಕಿವಿ ಕುರುಡಾಗಿದೆ. ದೆಹಲಿಯ ರೈತರ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುವ ಮುನ್ನ ಮಾರಕ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ದೆಹಲಿ ರೈತರ ಪ್ರತಿಭಟನೆಗೆ ಇನ್ನಷ್ಟು ಶಕ್ತಿ ತುಂಬಲಾಗುವುದು ಎಂದು ಪ್ರತಿಭಟನಾಕಾರರು ಈ ವೇಳೆ ತಿಳಿಸಿದರು.

Edited By : Nagesh Gaonkar
Kshetra Samachara

Kshetra Samachara

21/01/2021 04:44 pm

Cinque Terre

24.06 K

Cinque Terre

1

ಸಂಬಂಧಿತ ಸುದ್ದಿ