ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕಪ್ಪುಪಟ್ಟಿ ಕಟ್ಟಿ ಧರಣಿಗೆ ಕುಳಿತ ಕರಿಗಾರ

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್​ ‌ನೂತನ‌ ಕಟ್ಟಡ ಉದ್ಘಾಟನೆ ವೇಳೆ ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಜಿಪಂ ನೂತನ ಕಟ್ಟಡ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ. ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ ಎಂದು ಆರೋಪಿಸಿ, ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು.

ಸಚಿವ ಕೆ.ಎಸ್. ಈಶ್ವರಪ್ಪ ಅವರು ಶಿವಾನಂದ ಕರಿಗಾರ ಅವರ ಮನವೊಲಿಸಿದ ಬಳಿಕ ಪ್ರತಿಭಟನೆ ಹಿಂಡಪಡೆದರು. ಸಚಿವರು ಬಾರಯ್ಯ ಬಾ ಎಂದು ಕರಿಗಾರ ಅವರ ಕೈ ಹಿಡಿದು ಒಳ ಕರೆದುಕೊಂಡು ಹೋದರು.

Edited By : Manjunath H D
Kshetra Samachara

Kshetra Samachara

23/01/2021 02:41 pm

Cinque Terre

35.66 K

Cinque Terre

0

ಸಂಬಂಧಿತ ಸುದ್ದಿ