ನವಲಗುಂದ: ನವಲಗುಂದ ತಾಲೂಕಿನ ಹಲವೆಡೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಂದ ಭಾನುವಾರ ಅನೇಕ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಶಿವಳ್ಳಿ- ಹನಸಿ ರಸ್ತೆ ವಾಯ ಮೊರಬ- ಶಿರಕೋಳ ರಸ್ತೆ ಮಳೆಯಿಂದ ಹಾನಿಯಾಗಿದ್ದು, ಕಾಮಗಾರಿಗಾಗಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಮೊರಬ ಗ್ರಾಮದಲ್ಲಿ 36 ಲಕ್ಷ ರೂ. ವೆಚ್ಚದಲ್ಲಿ ಮೂರು ಕೊಠಡಿಗಳ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿ ಚಾಲನೆ, ಮೊರಬ ಗುಮ್ಮಗೋಳ ಬೆಟಸೂರ ಆಯಾ ಭಾಗಗಳಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ದುರಸ್ತಿ ಕಾಮಗಾರಿಗೆ ಚಾಲನೆ, ಮೊರಬ ಗ್ರಾಮದ ಪೊಲೀಸ್ ಠಾಣೆ ಹತ್ತಿರ 7 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿ.ಡಿ. ನಿರ್ಮಾಣ ಕಾಮಗಾರಿ ಗಳಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸ್ಥಳೀಯ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ, ಗ್ರಾಮಸ್ಥರು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
25/01/2021 12:05 pm