ಕುಂದಗೋಳ : ತಾಲೂಕಿನ ಸಂಶಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಮಂಡಳಿಯ ವಿವಿಧ ಸ್ಥಾನಗಳಿಗೆ ಫೆ.12 ರಂದು ಬೆಳಿಗ್ಗೆ 9 ರಿಂದ ಸಂಜೆ 4 ವರೆಗೆ ಸಂಘದ ಕಚೇರಿಯಲ್ಲಿ ಚುನಾವಣೆ ನಡೆಯಲಿದೆ.
ಜ.27 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಫೆ.4 ರಂದು ನಾಮಪತ್ರ ಸ್ವೀಕರಿಸಲು ಕೊನೆ ದಿನವಾಗಿದ್ದು, ಫೆ.5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಫೆ.6 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಫೆ.12 ರಂದು ಮತದಾನ ಹಾಗೂ ಮತ ಎಣಿಕೆ ಫಲಿತಾಂಶ ಹೊರ ಬೀಳಲಿದೆ ಎಂದು ಚುನಾವಣೆ ಅಧಿಕಾರಿ ರೇಣುಕಮ್ಮ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
25/01/2021 01:55 pm