ಧಾರವಾಡ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿವೆ ಎಂದು ಆರೋಪಿಸಿ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ಪರೇಡ್ ಗೆ ಧಾರವಾಡದಿಂದಲೂ ರೈತರು ಬೆಂಗಳೂರಿನತ್ತ ಹೋಗಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಬೆಂಗಳೂರಿನತ್ತ ಹೊರಟಿದ್ದು, ಜಿಲ್ಲೆಯ ಪ್ರತಿ ತಾಲೂಕಿನಿಂದ ರೈತರು ಈ ಟ್ರ್ಯಾಕ್ಟರ್ ಪರೇಡ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.
Kshetra Samachara
25/01/2021 09:35 pm