ಹುಬ್ಬಳ್ಳಿ- ದೆಹಲಿ ನಡೆಯುತ್ತಿರುವ ಟ್ರ್ಯಾಕ್ಟರ್ ರ್ಯಾಲಿ ಬೆಂಬಲಿಸಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ವಿವಿಧ ರೈತ ಸಂಘಡನೆಗಳು ಹಾಗೂ ಮಹಿಳೆಯರು ಸೇರಿಕೊಂಡು ಪ್ರತ್ಯೇಕವಾಗಿ ಟ್ರ್ಯಾಕ್ಟರ್ ರ್ಯಾಲಿ ನಡೆಸಿದರು.
ನಗರದ ಗ್ಲಾಸ್ ಹೌಸ್ ನಿಂದ ಅಂಬೇಡ್ಕರ್ ಸರ್ಕಲ್ ಮೂಲಕ ಚೆನ್ನಮ್ಮ ವೃತ್ತದವರೆಗೆ ರ್ಯಾಲಿ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದಿದಲ್ಲದೇ ರೈತರ ಮೇಲೆ ದಬ್ಬಾಳಿಕೆ ಹಾಗೂ ಗೂಂಡಾಗಿರಿ ಮಾಡುವ ಮೂಲಕ ರೈತರ ಹೋರಾಟವನ್ನು ಹತ್ತಿಕ್ಕಲಾಗುತ್ತಿದೆ ಎಂದು ಕಿಡಿಕಾರಿದರು.
Kshetra Samachara
26/01/2021 02:38 pm