ಧಾರವಾಡ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿವೆ ಎಂದು ಆರೋಪಿಸಿ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಧಾರವಾಡದಲ್ಲೂ ಬೃಹತ್ ಟ್ರ್ಯಾಕ್ಟರ್ ಪರೇಡ್ ನಡೆಸಲಾಯಿತು.
ಧಾರವಾಡದ ಜ್ಯುಬಿಲಿ ವೃತ್ತದಿಂದ ಆರಂಭವಾದ ಈ ಟ್ರ್ಯಾಕ್ಟರ್ ಪರೇಡ್ ನಲ್ಲಿ ಸುಮಾರು 200ಕ್ಕೂ ಅಧಿಕ ಟ್ರ್ಯಾಕ್ಟರ್ ಪಾಲ್ಗೊಂಡಿದ್ದವು. ಶಿವಾಜಿ ವೃತ್ತ, ಹಳೇ ಡಿಎಸ್ಪಿ ವೃತ್ತ, ಕೆ.ಸಿ.ಪಾರ್ಕ್ ಮೂಲಕ ಹಾಯ್ದು ಧಾರವಾಡ ಹೈಕೋರ್ಟ್ ವರೆಗೂ ಈ ಪರೇಡ್ ನಡೆಯಿತು.
ಮೆರವಣಿಗೆಯುದ್ದಕ್ಕೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಲಾಯಿತು. ಮೋದಿ ವಿರುದ್ಧ ಧಿಕ್ಕಾರ ಕೂಗಿದ ರೈತರು ಕೂಡಲೇ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದರು.
ರೈತರು ನಡೆಸಿದ ಈ ಟ್ರ್ಯಾಕ್ಟರ್ ಪರೇಡ್ ನಿಂದ ಧಾರವಾಡದ ಪ್ರಮುಖ ವೃತ್ತಗಳಲ್ಲಿ ಸಂಚಾರ ದಟ್ಟನೆ ಉಂಟಾಗಿತ್ತು. ಈ ಪರೇಡ್ ಗೆ ಕಾಂಗ್ರೆಸ್ ಮುಖಂಡರು ಕೂಡ ಸಾಥ್ ನೀಡಿದ್ದರು. ದೆಹಲಿಯಲ್ಲಿ ರೈತರು ನಡೆಸುತ್ತಿರುವ ಧರಣಿ ಹಾಗೂ ಟ್ರ್ಯಾಕ್ಟರ್ ಪರೇಡ್ ಬೆಂಬಲಾರ್ಥವಾಗಿ ಧಾರವಾಡದಲ್ಲೂ ರೈತರು ಟ್ರ್ಯಾಕ್ಟರ್ ಪರೇಡ್ ನಡೆಸಿದರು.
Kshetra Samachara
26/01/2021 03:59 pm