ಹುಬ್ಬಳ್ಳಿ: ಅಂತೂ ಇಂತೂ ಜೆಡಿಎಸ್ ಪಕ್ಷದ ಮುಖಂಡ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅಂದುಕೊಂಡ ಆಸೆಯಂತೇ ಸಭಾಪತಿಯಾಗುವ ಕನಸು ನನಸಾಗಲಿದೆ.
ಹೌದು..ಈ ಹಿಂದೇ ಹುಬ್ಬಳ್ಳಿ ಮಂತ್ರಾ ರೆಸಿಡೆನ್ಸಿಯಲ್ಲಿ ಬೆಳಗಾವಿ ವಿಭಾಗದ ಕೋರ್ ಕಮೀಟಿ ಸಭೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿಶ್ವಾಸ ವ್ಯಕ್ತಪಡಿಸಿದ ಬಸವರಾಜ ಹೊರಟ್ಟಿ ಆಸೆ ಕೈಗೂಡಿದೆ.ವಿಧಾನಪರಿಷತ್ ಸಭಾಪತಿ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟು
ಕೊಡಲು ನಿರ್ಧರಿಸಿರುವ ಬಿಜೆಪಿಯು ಉಪ ಸಭಾಪತಿ ಸ್ಥಾನಕ್ಕೆ ಎಂ.ಕೆ.ಪ್ರಾಣೇಶ್ ಅವರನ್ನು ಕಣಕ್ಕಿಳಿಸಲಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬುಧವಾರ ರಾತ್ರಿ ನಡೆದ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಭಾಪತಿ ಸ್ಥಾನಕ್ಕೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರ ಹೆಸರನ್ನು ಜೆಡಿಎಸ್ ಈಗಾಗಲೇ ಅಂತಿಮಗೊಳಿಸಿದೆ. ಈ ಮೂಲಕ ಮೇಲ್ಮನೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ.
ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಅನುಮತಿ ಪಡೆದಿದ್ದಾರೆ. ಹೊರಟ್ಟಿಯವರ ವಿವರವನ್ನೂ ಪಡೆದ ಬಳಿಕ ವರಿಷ್ಠರು ಒಪ್ಪಿಗೆ ನೀಡಿದರು ಎಂದು ಬಿಜೆಪಿ ಮೂಲಗಳು ಹೇಳಿವೆ.
ಸಭೆಗೂ ಮುನ್ನ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಸೂಚನೆಯ ಮೇರೆಗೆ ಬಸವರಾಜ ಹೊರಟ್ಟಿ ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸಭಾಪತಿ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕು ಎಂದು ಅವರು ಮನವಿ ಮಾಡಿದರು.ಇನ್ನೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಬಸವರಾಜ ಹೊರಟ್ಟಿ ಅವಧಿ ಒಂದೂವರೆ ವರ್ಷ ಬಾಕಿ ಇದೆ.
Kshetra Samachara
28/01/2021 10:09 am