ಹುಬ್ಬಳ್ಳಿ: "ಬೆಳಗಾವಿಯಲ್ಲಿ ಅಧಿವೇಶನ ನಡೆಸದೇ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಿರುವುದಕ್ಕೆ ಧಿಕ್ಕಾರ" ಎಂಬ ಘೋಷಣೆಯ ಭಿತ್ತಿಪತ್ರ ಹಿಡಿದು ಸದನದಲ್ಲಿ ಶಾಸಕರಾದ ಪ್ರಸಾದ ಅಬ್ಬಯ್ಯ, ವಿಜಯ ಸಿಂಗ್, ಕಾಂಗ್ರೆಸ್ ಮುಖಂಡ ಶ್ರೀನಿವಾಸ ಮಾನೆ ಅವರು ಪ್ರತಿಭಟನೆ ನಡೆಸಿದರು.
ಬೆಂಗಳೂರಿನಲ್ಲಿ ಇಂದು ನಡೆದ ಜಂಟಿ ಅಧಿವೇಶನ ಸಮಯದಲ್ಲಿ ಈ ಪ್ರಸಂಗ ಕಂಡು ಬಂದಿತು. ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಿ ಈ ಭಾಗದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ವಹಿಸುವಂತೆ ಜಂಟಿ ಸದನದಲ್ಲಿ ಶಾಸಕರು ಒತ್ತಾಯಿಸಿದರು.
Kshetra Samachara
28/01/2021 07:44 pm