ಕುಂದಗೋಳ : ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ನ್ಯಾಯಾಧೀಶೆ ಶೈನಿ.ಕೆ.ಎಮ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಬಳಿಕ ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಿ ಆರು ತಿಂಗಳು ತುಂಬಿದ ಮಕ್ಕಳಿಗೆ ಅನ್ನಪ್ರಾಶನ ಹಾಗೂ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನೆರವೇರಿಸಿದರು.
ಬಳಿಕ ಕುಂದಗೋಳ ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ಹೆಣ್ಣು ಮಕ್ಕಳ ಸಂರಕ್ಷಣೆ ಘೋಷಣೆಯ ಜಾಥಾ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿತು.
Kshetra Samachara
29/01/2021 09:02 pm