ಧಾರವಾಡ: ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ಖಂಡಿಸಿ ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದ ಕಾಂಗ್ರೆಸ್ ಮುಖಂಡರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು.
ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬೆಲೆ ಏರಿಕೆ ನಿಯಂತ್ರಣಕ್ಕೆ ಬರುತ್ತದೆ ಎಂದು ಹೇಳಿತ್ತು. ಆದರೆ, ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಹೆಚ್ಚಳ ಮಾಡುತ್ತಲೇ ಇದೆ.
ಕಾಂಗ್ರೆಸ್ ಸರ್ಕಾರ ಇದ್ದಾಗ ಇಂಧನದ ಬೆಲೆ ನಿಯಂತ್ರಣದಲ್ಲಿತ್ತು. ಆದರೆ, ಬಿಜೆಪಿ ಸರ್ಕಾರ ಬಂದ ಮೇಲೆ ಇಂಧನದ ಬೆಲೆ ಗಗನಕುಸುಮವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕೊಟ್ಟ ದೊಡ್ಡ ಕೊಡುಗೆಯೇ ಬೆಲೆ ಏರಿಕೆಯಾಗಿದೆ.
ಕೂಡಲೇ ಸರ್ಕಾರ ಇಂಧನ ಬೆಲೆಯನ್ನು ಇಳಿಕೆ ಮಾಡಿ ಜನಸಾಮಾನ್ಯರ ಮೇಲೆ ಆಗಿರುವ ಹೊರೆಯನ್ನು ಕಡಿಮೆ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.
Kshetra Samachara
30/01/2021 11:53 am