ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ಹುಬ್ಬಳ್ಳಿ: ವಾರ್ಡ್ ನಂ.27ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ಸಿದ್ಧೇಶ್ವರ ನಗರದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಉದ್ಯಾನವನದ ಕಾಂಪೌಡ್ ನಿರ್ಮಾಣ, 26 ಲಕ್ಷ ರೂ. ವೆಚ್ಚದಲ್ಲಿ ಒಳ ರಸ್ತೆಗಳ ಕಾಂಕ್ರಿಟೀಕರಣ, 23 ಲಕ್ಷ ರೂ. ವೆಚ್ಚದ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಸಾಯಿನಗರದಲ್ಲಿ ಪಂಚಾಯಿತ್ ರಾಜ್ಯ ಹಾಗೂ ಇಂಜಿನಿಯರಿಂಗ್ ಇಲಾಖೆಯ, ಬಯಲು ಸೀಮೆ ಅಭಿವೃದ್ಧಿ ಯೋಜನೆಯಡಿ 10 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.

ಸಿದ್ಧೇಶ್ವರ ನಗರದ ಉದ್ಯಾನವನದಲ್ಲಿ ಸಚಿವರು ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವುದರೊಂದಿಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಪಾಲಿಕೆ ಮಾಜಿ ಮಹಾಪೌರರಾದ ಅಶ್ವಿನಿ ಮಜ್ಜಿಗೆ, ಮಾಜಿ ಸದಸ್ಯರುಗಳಾದ ರಾಜಣ್ಣ ಕೊರವಿ, ಮುಖಂಡರಾದ ತಿಪ್ಪಣ ಮಜ್ಜಗಿ ಸೇರಿದಂತೆ ಮತ್ತಿರರು ಇದ್ದರು.

Edited By : Vijay Kumar
Kshetra Samachara

Kshetra Samachara

31/01/2021 04:58 pm

Cinque Terre

42.42 K

Cinque Terre

1

ಸಂಬಂಧಿತ ಸುದ್ದಿ