ನವಲಗುಂದ: ತಾಲೂಕಿನ ಬೆಳವಟಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೂ ಅವಕಾಶ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ ಪಡಕಿ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.
ಶಾಲೆಯ ಉಸ್ತುವಾರಿ ಸಮಿತಿ ಆರಂಭವಾದಾಗಿನಿಂದ ಇದುವರೆಗೂ ಪ.ಜಾತಿ ಮತ್ತು ಪ.ಪಂಗಡದವರಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿಲ್ಲಾ, ಈಗಾಗಲೇ ಆಯ್ಕೆ ಆದವರನ್ನು ರದ್ದುಗೊಳಿಸಿ ನೂತನವಾಗಿ ಸಮಿತಿ ಸದಸ್ಯನ್ನು ಆಯ್ಕೆ ಮಾಡಲು ಅವಕಾಶ ನೀಡಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಮಿತಿ ವತಿಯಿಂದ ಧರಣಿ ಪ್ರತಿಭಟನೆಗೆ ಮುಂದಾಗಬೇಕಾಗುತ್ತೆ ಎಂದು ಎಚ್ಚರಿಸುತ್ತ ಮನವಿ ಸಲ್ಲಿಸಲಾಯಿತು.
Kshetra Samachara
01/02/2021 03:31 pm