ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಿರಿ

ಧಾರವಾಡ: ಕೇಂದ್ರ ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ನಡೆಸುತ್ತಿರುವ ಧರಣಿಗೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ರೈತರು ಬೆಂಬಲ ಸೂಚಿಸಿದರು.

ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ದೆಹಲಿಯಲ್ಲಿ ಪಂಜಾಬ್ ಹಾಗೂ ಹರಿಯಾಣಾ ರಾಜ್ಯಗಳ ರೈತರು ನಡೆಸುತ್ತಿರುವ ಧರಣಿಯ ಬೆಂಬಲಾರ್ಥವಾಗಿ ಧಾರವಾಡದಲ್ಲೂ ಈ ಧರಣಿ ನಡೆಯುತ್ತಿದೆ.

ಗಾಂಧೀಜಿ ಪುಣ್ಯಸ್ಮರಣೆ ಸಂದರ್ಭದಲ್ಲಿ ಉಪವಾಸ ಸತ್ಯಾಗ್ರಹ ಮಾಡಲಾಗಿತ್ತು. ಇಂದು ಚಿಕ್ಕಮಲ್ಲಿಗವಾಡ ಗ್ರಾಮದ ರೈತರು ಕೂಡ ನೀರಲಕೇರಿ ಅವರು ಧರಣಿಗೆ ಬೆಂಬಲ ಸೂಚಿಸಿದರು.

Edited By : Manjunath H D
Kshetra Samachara

Kshetra Samachara

01/02/2021 04:22 pm

Cinque Terre

34.39 K

Cinque Terre

3

ಸಂಬಂಧಿತ ಸುದ್ದಿ