ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಮಕ್ಕಳ ಹಕ್ಕುಗಳ ಮಾಸಾಚರಣೆ ಅಧಿಕಾರಿಗಳ ವರ್ಗ ಚರ್ಚೆ

ಕುಂದಗೋಳ : ಮಕ್ಕಳ ಬೆಳವಣಿಗೆಗೆ ಪೂರಕವಾದ ವಾತಾವರಣ ಕಲ್ಪಿಸಿ ಅವರ ಮನಸ್ಸನ್ನು ಶಿಕ್ಷಣದ ಎಡೆಗೆ ಕೇಂದ್ರಿಕೃತ ಮಾಡಲು ಹೊಸ ಹೊಸ ಯೋಜನೆ ಜಾರಿಯಲ್ಲಿರಬೇಕು ಈ ಬಗ್ಗೆ ಎಲ್ಲಾ ಇಲಾಖೆಗಳು ಯೋಜನೆ ರೂಪಿಸಿಬೇಕೆಂದು ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಅಶೋಕ್ ಯರಗಟ್ಟಿ ಹೇಳಿದರು.

ಅವರು ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಮಾಸಾಚರಣೆ ಹಾಗೂ ತಾಲೂಕು ಮಟ್ಟದ ಮಕ್ಕಳ ಅಭಿವೃದ್ಧಿ ವಿಷಯದ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಮಕ್ಕಳ ಏಳ್ಗೆಗಾಗಿ ಕೈಗೊಳ್ಳಬಹುದಾದ ಕ್ರಮ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನ್ನಪೂರ್ಣ ಸಂಗಳದ ಮಾತನಾಡಿ ತಮ್ಮ ಇಲಾಖೆ ವತಿಯಿಂದ ನೀಡಬಹುದಾದ ಸೌಲಭ್ಯಗಳ ಬಗ್ಗೆ ಇತರ ಅಧಿಕಾರಿಗಳ ಜೊತೆ ಚರ್ಚಿಸಿ ಮಕ್ಕಳ ಏಳ್ಗೆಗಾಗಿ ಇಲಾಖೆ ಮಾಡಿದ ಕಾರ್ಯ ವೈಖರಿ ತಿಳಿಸಿದರು.

ಈ ಸಂದರ್ಭದಲ್ಲಿ ತಹಶಿಲ್ದಾರ ಬಸವರಾಜ ಮೆಳವಂಕಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್.ಮಠಪತಿ ಉಪಸ್ಥಿತರಿದ್ದು ತಮ್ಮ ಅಭಿಪ್ರಾಯ ಹಂಚಿಕೊಂಡರು, ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲಕರು ಸಭೆಯಲ್ಲಿದ್ದರು.

Edited By : Nirmala Aralikatti
Kshetra Samachara

Kshetra Samachara

02/02/2021 03:47 pm

Cinque Terre

12.21 K

Cinque Terre

0

ಸಂಬಂಧಿತ ಸುದ್ದಿ