ಧಾರವಾಡ: ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿದೆ.
ಒಟ್ಟು 27 ಜನ ಸದಸ್ಯರ ಬಲಾಬಲ ಹೊಂದಿರುವ ಉಪ್ಪಿನ ಬೆಟಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನ ಅಲಂಕರಿಸುವುದಕ್ಕಾಗಿ ಒಟ್ಟು 14 ಜನ ಸದಸ್ಯರ ಬಲ ಬೇಕಾಗಿತ್ತು. ಆದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮೀ ಆಯಟ್ಟಿ ಅವರು ಒಟ್ಟು 18 ಜನ ಸದಸ್ಯರ ಬಲದೊಂದಿಗೆ ಅಧ್ಯಕ್ಷ ಗಾದಿ ಅಲಂಕರಿಸಿದರು. ಇನ್ನೋರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಅಬ್ದುಲ್ ಲಂಗೋಟಿ ಕೂಡ 18 ಜನ ಸದಸ್ಯರ ಬೆಂಬಲದೊಂದಿಗೆ ಉಪಾಧ್ಯಕ್ಷ ಸ್ಥಾನ ಅಲಂಕರಿಸಿದರು.
ಈ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅ ವರ್ಗದ ಅಭ್ಯರ್ಥಿ ಮೀಸಲಾತಿ ಪ್ರಕಟವಾಗಿತ್ತು. ಇದಕ್ಕಾಗಿ ಗ್ರಾಮ ಪಂಚಾಯ್ತಿಮಟ್ಟದಲ್ಲೂ ಭಾರೀ ಲಾಬಿ ಕೂಡ ನಡೆಸಲಾಗಿತ್ತು.
ಈ ಹಿಂದೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಹಾವೀರ ಅಷ್ಟಗಿ ಅವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು. ಗ್ರಾಮದಲ್ಲಿ ಬಿಜೆಪಿ ಪ್ರಭಾವವಿದ್ದರೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಇಲ್ಲಿ ಮೇಲುಗೈ ಸಾಧಿಸಿರುವುದು ಬಿಜೆಪಿ ಮುಖಂಡರಿಗೆ ಭಾರೀ ಮುಖಭಂಗವನ್ನುಂಟು ಮಾಡಿದಂತಾಗಿದೆ.
Kshetra Samachara
02/02/2021 05:40 pm